Akshaya Sharadhotsava
Darbe Salon
Mahalingeshwara Car Air Condition
New Dot Dress Mart


ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ , ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ಸವಣೂರು- 65 ಬೂತ್ ಸಮಿತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಸವಣೂರು ಬೇರಿಕೆ ನಿವಾಸಿ, ಪುತ್ತೂರು ವಿವೇಕಾನಂದ ಮಹಾವಿದ್ಯಾಲಯ ಹಾಗೂ ಉಪ್ಪಿನಂಗಡಿ ಇಂದ್ರಪ್ರಸ್ಥ ಪ್ರೌಢಶಾಲೆಗಳಲ್ಲಿ ದೈಹಿಕಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬಳಿಕ ಸ್ವಯಂ ನಿವೃತ್ತಿ ಪಡೆದು ಪ್ರಸ್ತುತ ಕೃಷಿ ಕಾರ್ಯ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಶ್ರೀಮತಿ ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ , ಗೌರವಾರ್ಪಣೆ ಕಾರ್ಯಕ್ರಮವನ್ನು ಅವರ ಮನೆಯಲ್ಲಿ ನಡೆಸಲಾಯಿತು.

Out Look Fashion


ಈ ಸಂದರ್ಭದಲ್ಲಿ ದ ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ , ಸವಣೂರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್, ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಚೇತನ್ ಕೋಡಿಬೈಲು, ಬೂತ್ ಸಮಿತಿ ಅಧ್ಯಕ್ಷ ತೀರ್ಥರಾಮ ಕೆಡೆಂಜಿ, ಕಾರ್ಯದರ್ಶಿ ಸತೀಶ್ ಬಲ್ಯಾಯ, ಸಿ.ಎ ಬ್ಯಾಂಕ್ ನಿರ್ದೇಶಕ ಅಶ್ವಿನ್ ಎಲ್ ಶೆಟ್ಟಿ , ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಚಂದ್ರಾವತಿ ಸುಣ್ಣಾಜೆ , ಶ್ರೀಮತಿ ಇಂದಿರಾ ಬೇರಿಕೆ ಉಪಸ್ಥಿತರಿದ್ದರು

Jaya Refrigeration and Air Condition