Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಶ್ರೀರಂಗಪಟ್ಟಣ ತಾಲೂಕಿನಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ನಾಲ್ವರು ಗಾಯಗೊಂಡಿದರುವ ಘಟನೆ ನಡೆದಿದೆ.

Out Look Fashion

ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಬೆಂಗಾವಲು ಪಡೆಯಲ್ಲಿ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಟಿಎಂ ಹೊಸೂರು ಗೇಟ್ ಬಳಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

Jaya Refrigeration and Air Condition

ಬೆಂಗಾವಲು ವಾಹನದ ಚಾಲಕನ ನಿಯಂತ್ರಣ ತಪ್ಪಿ ವಾಹನ ಉರುಳಿಬಿದ್ದು, ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ಪರಿಣಾಮ ವಾಹನಕ್ಕೆ ಭಾಗಶಃ ಹಾನಿಯಾಗಿದೆ.


ಗಾಯಗೊಂಡವರಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.