



ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ.


ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 25-07-2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

