Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣದಲ್ಲಿ ಬಂದಿತನಾಗಿರುವ ಬಪ್ಪಳಿಗೆ ನಿವಾಸಿ ನಗರಸಭೆ ಸದಸ್ಯ ಪಿ ಜಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ ರಾವ್ ಮನೆಯಲ್ಲಿ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.

Out Look Fashion

ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ನೇತೃತ್ವದಲ್ಲಿ ಆರೋಪಿಯ ಮನೆಯಲ್ಲಿ ಸ್ಥಳ ಮಹಜರು ನಡೆಯಿತು.

Jaya Refrigeration and Air Condition

ಆರೋಪಿಯು ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಬಪ್ಪಳಿಗೆಯ ಆತನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.


ಈ ಹಿನ್ನೆಲೆಯಲ್ಲಿ ಬಪ್ಪಳಿಗೆ ಮನೆಯಲ್ಲಿ ಮಹಜರು ನಡೆಯಿತು.ಈ ಸಂದರ್ಭ ಸಂತ್ರಸ್ತೆ ಆಕೆಯ ಮಗು ಮತ್ತು ತಾಯಿ ಅಲ್ಲದೆ ಆರೋಪಿಯ ಸಹೋದರಿ, ಓರ್ವ ಸಾಕ್ಷಿದಾರ ಹಾಗೂ ವಕೀಲೆ ಶೈಲಜಾ ಅಮರನಾಥ್ ಉಪಸ್ಥಿತರಿದ್ದರು ಎಂದು ಮಾಹಿತಿ ಲಭಿಸಿದೆ.


ಪ್ರಕರಣದ ಆರೋಪಿ ಶ್ರೀಕೃಷ್ಣಜೆ ರಾವ್ ಜಾಮೀನಿನಲ್ಲಿ ಬಿಡುಗಡೆ ಕೋರಿಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ಈಗಾಗಲೇ ವಜಾಗೊಳಿಸಿದೆ.ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದು ಆತನ ಪರ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.