




ಪುತ್ತೂರು: ಆಟೋರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ
ಹೋಟೆಲ್ ಮಾಲೀಕರೊಬ್ಬರಿಗೆ ಎದುರಿನಿಂದ ಬಂದ ಇನ್ನೊಂದು ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪುತ್ತೂರು ತಾಲೂಕಿನ ಕೌಡಿಚ್ಚಾರ್-ಮೈಂದನಡ್ಕ ರಸ್ತೆಯ ಪಾಪೆಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪಾಪೆಮಜಲು ನಿವಾಸಿ ಸುಭಾಷ್ ಕುಲಾಲ್ (55) ಎಂದು ಗುರುತಿಸಲಾಗಿದೆ.

ವಿಷಯ ತಿಳಿದು ಸಂಪ್ಯ ಠಾಣಾ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

