



ಕುಶಾಲನಗರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕೊಡಗಿನ ಆನೆಕಾಡು ಎಂಬಲ್ಲಿ ನಡೆದಿದೆ.


ಮೃತ ಪಟ್ಟ ಬೈಕ್ ಸವರನನ್ನು ಪೆರುವಾಜೆ ಕಾರ್ತಿಕ್ ಭಟ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
