Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ
ಶುರುವಾಗುವ ಲಕ್ಷಣ ಕಂಡು ಬಂದಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ರಾಜ್ಯದ 11 ಜಿಲ್ಲೆಗಳಿಗೆ ಸೋಮವಾರ ಹವಾಮಾನ ಇಲಾಖೆಯು (ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ.
ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯು ಇದೀಗ ಮತ್ತೆ ಹೆಚ್ಚಾಗಲಿದೆ.

Out Look Fashion

ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ತುಮಕೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಸೋಮವಾರ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಆ.7ರ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Jaya Refrigeration and Air Condition


ರಾಜಧಾನಿಗೂ ಹಳದಿ ಅಲರ್ಟ್ ಘೋಷಣೆ:
ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.