



ದೆಹಲಿ : ಏಪ್ರಿಲ್ 22ರಂದು ನಡೆದ ಪಹಲ್ಕಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸಿಗಾಗಿ ಇಂದು ಬಿಜೆಪಿ ನೇತೃತ್ವದ ಎನ್‌ಡಿಎ ನಿಯೋಗ ನಡೆಸಿದ ಸಂಸದೀಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಲಾಯಿತು.


ಸಂಸತ್ ಭವನದಲ್ಲಿ ಇಂದು ನಡೆದ ಸಂಸದೀಯ ಸಭೆಯಲ್ಲಿ ಆಪರೇಷನ್ ಸಿಂಧೂರ ಯಶಸ್ಸಿಗಾಗಿ ‘ಜೈ ಶ್ರೀರಾಮ್, ಹರಹರ ಮಹದೇವ್, ಭಾರತ್ ಮಾತಾಕಿ ಜೈ’ ಎಂಬಿತ್ಯಾದಿ ಘೋಷಣೆಗಳ ನಡುವೆ ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಲಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿಗಳಿಗೆ ಹಾರ ಹಾಕಿ ಗೌರವಿಸಿದರು. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಎನ್‌ಡಿಎ ಸಂಸದರು ಈ ಸಂತಸದ ಕ್ಷಣಕ್ಕೆ ಸಾಕ್ಷಿಯಾದರು. ನಂತರ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ‘ಆಪರೇಷನ್ ಸಿಂಧೂರ ಹಾಗೂ ಆಪರೇಷನ್ ಮಹಾದೇವ್’ ಯಶಸ್ಸಿನ ಕುರಿತು ನಿರ್ಣಯ ಅಂಗೀಕರಿಸಲಾಯಿತು.

