




ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿರುವ 68 ಗ್ರಾಮ ಪಂಚಾಯತಿಗಳ ಘನ ತ್ಯಾಜ್ಯ ನಿರ್ವಹಣಾ ಘಟಕಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಕೆದಂಬಾಡಿಯಲ್ಲಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF-Material Recovery Facility ) ವತಿಯಿಂದ ಕಾಲಕಾಲಕ್ಕೆ ಗ್ರಾಮ ಪಂಚಾಯತ್ ಗಳಿಂದ ಒಣ ಕಸವನ್ನು ಸಂಗ್ರಹಿಸದ ಕಾರಣ ಆಗುತ್ತಿರುವ ಸಮಸ್ಯೆ ಬಗ್ಗೆ ಪರಿಶೀಲಿಸುವ ಉದ್ದೇಶದಿಂದ ಇಂದು ಸದರಿ MRF ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು


ಈ ಸಂದರ್ಭದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ, ಸದಸ್ಯರಾದ ಶ್ರೀ ರತನ್ ಕುಮಾರ್, ಶ್ರೀ ಕೃಷ್ಣ ಕುಮಾರ್,ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀ ಅಜಿತ್ ಕುಮಾರ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು BJP ಕೆದಂಬಾಡಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಶ್ರೀ ಶರತ್ ಕುಮಾರ್ ಮತ್ತು MRF ಘಟಕದ ವ್ಯವಸ್ಥಾಪಕರಾದ ಪ್ರಶಾಂತ್ ರವರು , ಕಾರ್ಯಚರಣೆ ಕುರಿತು ಮಾಹಿತಿ ನೀಡಿದರು.


ಪ್ರಸ್ತುತ ಸದರಿ ಘಟಕಕ್ಕೆ ಅಗತ್ಯವಿರುವ ಘನ ತ್ಯಾಜ್ಯ ಸಂಗ್ರಹಣೆ ವಾಹನ ಮತ್ತು ವಿದ್ಯುತ್ ಪೂರೈಕೆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೂಡಲೇ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಲಾಯಿತು

