



ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೆಳಂದೂರು ಇಲ್ಲಿ ನಡೆದ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯಲ್ಲಿ ಸಾಧಕ ವಿಧ್ಯಾರ್ಥಿಗಳನ್ನು ಗೌರವಿಸಲಾಯಿತು.


2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದು ರಾಜ್ಯಕ್ಕೆ 5ನೇ ಸ್ಥಾನ ಮತ್ತು ಸರಕಾರಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಶ್ರೀವಿದ್ಯಾ ಎನ್. ಅವರನ್ನು ಸನ್ಮಾನಿಸಲಾಯಿತು. 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಹನ್ಸಿಕಾ ಅವರ ಪರವಾಗಿ ತಾಯಿ ವೈಶಾಲಿ ಸನ್ಮಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ವಿಠಲ ಗೌಡ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ, ಮೋಹನ್ ಆಗಳಿ, ಪ್ರವೀಣ್ ಕೆರೆನಾರು, ಜಯರಾಮ ಬೆಳಂದೂರು, ಉಮೇಶ್ವರಿ ಆಗಳಿ, ಪಾರ್ವತಿ ಮರಕ್ಕಡ, ಗೀತಾ ಕುವೆತ್ತೋಡಿ, ಹರಿಣಾಕ್ಷಿ ಬನಾರಿ, ಕುಸುಮಾ ಅಂಕಜಾಲು, ತಾರಾ ಅನ್ಯಾಡಿ, ಗೌರಿ ಮಾದೋಡಿ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ.ಕೆ ಚರ್ಚಾ ನಿಯಂತ್ರಣ ಅಧಿಕಾರಿ ವಿದ್ಯಾ ರಾಣಿ,ಲೆಕ್ಕಸಹಾಯಕಿ ಸುನಂದಾ, ವಿವಿಧ ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

