




ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಏಕ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆ, (ನಮೂನೆ 9 &11A)ಕಟ್ಟಡ ನಕ್ಷೆಗೆ ತಾಂತ್ರಿಕ ಅನುಮೋದನೆ ಮತ್ತು ಸ್ವಾಧೀನ ಪ್ರಮಾಣ ಪತ್ರ ಪಡೆಯಲು ತೊಂದರೆ ಉಂಟಾಗುತ್ತಿರುವ ಕಾರಣ ನಗರ ಯೋಜನಾ ಪ್ರಾಧಿಕಾರಗಳಲ್ಲಿ ವಿನ್ಯಾಸ ನಕ್ಷೆ ಅನುಮೋದನೆಯನ್ನು ಸಕಾಲ ಕಾಯ್ದೆಯಡಿ ಅಳವಡಿಸುವಂತೆ, ಪ್ರಥಮವಾಗಿ ಅರ್ಜಿಯನ್ನು ನೀಡಿದವರಿಗೆ ಪ್ರಥಮಾದ್ಯತೆ ನೀಡುವಂತೆ (FIFO -First in First out ) ಮಧ್ಯವರ್ತಿಗಳಿಗೆ ಅವಕಾಶ ನೀಡದಂತೆ ಮತ್ತು ಸ್ಯಾಂಡ್ ಬಜಾರ್ ಆಪ್ ನಲ್ಲಿ ಕಳಪೆ ಗುಣಮಟ್ಟದ ಮರಳು ದೊರೆಯುತ್ತಿರುವ ಹಿನ್ನೆಲೆಯಲ್ಲಿ ಸದರಿ ಸಮಸ್ಯೆಯನ್ನು ಬಗೆಹರಿಸುವಂತೆ ಕೋರಿ ಇಂದು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಮನವಿ ಸಲ್ಲಿಸಲಾಯಿತು.

