Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳ್ತಂಗಡಿ : ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ನೇಕಾರಿಕೆಗೆ ಉತ್ತೇಜನ ಮತ್ತು ಉತ್ಪನ್ನಗಳಿಗೆ ಪ್ರಚಾರವನ್ನು ನೀಡುವ ಸಲುವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. ಸ್ವದೇಶಿ ಚಳವಳಿಯ ನೆನಪಿಗಾಗಿ 2015 ರ ಆಗಸ್ಟ್‌ 7 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ ನೀಡಿದ್ದರು.

Out Look Fashion

ಆ 07 ರಂದು ರಾಷ್ಟ್ರೀಯ ಕೈಮಗ್ಗದ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಲಾಯಿಲದಲ್ಲಿರುವ ಸಿರಿ ಗ್ರಾಮೋದ್ಯೋಗ ಸಂಸ್ಥೆ ಗೆ ತೆರಳಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಖಾದಿಯ ಬಟ್ಟೆಗಳನ್ನು ಖರೀದಿ ಸಲಾಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾಜಯಂತ್, ಹಾಗೂ ಶ್ರೀಮತಿ ತುಳಸಿ ಉಮೇಶ್ ಸದಸ್ಯರಾದ ಶ್ರೀಮತಿ ರಶ್ಮಿ ಪಠವರ್ಧನ್ ಹಾಗೂ ಶ್ರೀಮತಿ ಶ್ರೀಲಕ್ಷ್ಮಿ ರಾವ್ ಮತ್ತಿತರರು ಉಪಸ್ಥಿತರಿದ್ದರು.

Jaya Refrigeration and Air Condition