Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ರಾಜ್ಯ ವಿಧಾನಮಂಡಲ ಮುಂಗಾರು
ಅಧಿವೇಶನ ಇಂದು ಆರಂಭವಾಗಿದ್ದು ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಪ್ರತಿಭಟನೆ ನಡೆಸುತ್ತಿವೆ.
ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಎನ್‌ಡಿಎ ಮೈತ್ರಿಕೂಟದ ಶಾಸಕರು ಪ್ರತಿಭಟನೆ ನಡೆಸಿದರು.

Out Look Fashion
Screenshot


ಪ್ರತಿಭಟನೆ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ನಡೆದು 11 ಜನ ಅಮಾಯಕರು ಪ್ರಾಣಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ, ಸಚಿವರು ಹೊಣೆಹೊರುವುದು ಬಿಟ್ಟು ಅಮಾಯಕ ಪೊಲೀಸ್‌ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ, ಅಮಾನತು ಮಾಡಿದ್ದರು. ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ, ಯುವಜನತೆ ಸರ್ಕಾರಿ ಉದ್ಯೋಗಕ್ಕಾಗಿ ಹೋರಾಡುತ್ತಿದ್ದಾರೆ. ಇದರ ವಿರುದ್ಧ ಸದನದ ಹೊರಗಡೆ ಹಾಗೂ ಒಳಗಡೆ ನಾವು ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

Jaya Refrigeration and Air Condition