



ಚಾಮರಾಜನಗರ: ಇಲ್ಲಿನ ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಹಸಿವಿನಿಂದ ನಿತ್ರಾಣಗೊಂಡು ಹುಲಿ ಮರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.


ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಬಳಿ ಸಾವನ್ನಪ್ಪಿವೆ.

ಸುಮಾರು 10 ದಿನದ ಹಿಂದೆಯೇ ಒಂದು ಹೆಣ್ಣು, ಒಂದು ಗಂಡು ಹುಲಿ ಮರಿಗಳು ಸಾವನ್ನಪ್ಪಿವೆ. ತಾಯಿಯಿಂದ ಹುಲಿ ಮರಿಗಳು ಬೇರ್ಪಟ್ಟಿದ್ದವು ಎಂಬ ಮಾಹಿತಿಯಿದೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನ ವೇಳೆ ಹುಲಿ ಮರಿಗಳ ಸಾವು ಬೆಳಕಿಗೆ ಬಂದಿದೆ. ಎರಡು ಮೂರು ದಿನಗಳ ವ್ಯತ್ಯಾಸದಲ್ಲಿ ಹುಲಿ ಮರಿಗಳು ಸಾವನ್ನಪ್ಪಿದೆ. ತಾಯಿಯಿಂದ ಬೇರ್ಪಟ್ಟು ಹಸಿವಿನಿಂದ ನಿತ್ರಾಣಗೊಂಡು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
