




ಕಡಬ ತಾಲೂಕು ಚಾರ್ವಾಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು. ಕಡಬ ತಾಲೂಕಿನ ಆರೋಗ್ಯ ಇಲಾಖೆಯ ಕೌನ್ಸಿಲರ್ ಶ್ವೇತಾ ಅವರು ಮಾದಕ ವಸ್ತುಗಳ ದುರುಪಯೋಗ ಮತ್ತು ನಿರ್ವಹಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಚಾರ್ವಕ ಸಿ ಎಚ್ ಓ ಪುಷ್ಪಲತಾ ಕೆ ಮಾದಕ ವಸ್ತುಗಳಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿ, ಮುಖ್ಯ ಗುರುಗಳಾದ ಪದ್ಮಯ ಗೌಡ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

