Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಕಾರವಾರ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ ಶುಕ್ರವಾರ (ಆ.15) ಮಧ್ಯರಾತ್ರಿ ನಡೆದಿದೆ. ಅಪಘಾತದಲ್ಲಿ 7 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

Out Look Fashion

ಮೃತರನ್ನು ಬಾಗಲಕೋಟೆ ಮೂಲದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಎಂದು ಗುರುತಿಸಲಾಗಿದೆ. ಮತ್ತೊಬ್ಬ 45 ವರ್ಷದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. 7 ಹಾಗೂ 12 ವರ್ಷದ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Jaya Refrigeration and Air Condition

ಬಾಗಲಕೋಟೆಯಿಂದ ಮಂಗಳೂರು ಕಡೆ ಹೊಗುತ್ತಿದ್ದ ಬಸ್, ಮಾವಳ್ಳಿ ಕ್ರಾಸ್ ಬಳಿ ಇಂಡಿಕೇಟರ್ ಹಾಕದೇ ನಿಲ್ಲಿಸಿದ್ದ ಕೇರಳ ಮೂಲದ ಲಾರಿಗೆ ಡಿಕ್ಕಿಯಾಗಿದೆ. ವೇಗವಾಗಿ ಗುದ್ದಿದ ಪರಿಣಾಮ ಬಸ್ ಒಂದು ಬದಿ ಸಂಪೂರ್ಣ ನಜ್ಜು ಗುಜ್ಜಾಗಿದೆ. ಇನ್ನೂ ಓವರ್‌ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.