Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಸರ್ಕಾರಿ ಕೆಲಸಗಳಿಗೆ ಇನ್ನುಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು.

Out Look Fashion

ಸಭೆಯಲ್ಲಿ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ. ಇಷ್ಟು ದಿನ ಗಂಟೆಗಳ ಅವಧಿಯಲ್ಲಿ ಹೆಲಿಕಾಪ್ಟರ್/ವಿಶೇಷ ವಿಮಾನ ಗುತ್ತಿಗೆ ಪಡೆಯಲಾಗುತ್ತಿತ್ತು. ಇನ್ನು ಮುಂದೆ ಗಂಟೆಗಳ ಆಧಾರದಲ್ಲಿ ಬಾಡಿಗೆ ಪಡೆಯದೇ ಇರಲು ನಿರ್ಧಾರ ಮಾಡಲಾಗಿದೆ. ಗಂಟೆಗಳ ಬದಲಾಗಿ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್/ವಿಮಾನ ಸೇವೆ ಪಡೆಯಲು ನಿರ್ಧಾರ ಮಾಡಲಾಗಿದೆ. ವಾರ್ಷಿಕ ಗುತ್ತಿಗೆಗೆ ಸೂಕ್ತ ತರಬೇತಿ ಹೊಂದಿರುವ ಸಂಸ್ಥೆಗಳಿಗೆ ಟೆಂಡರ್ ಆಹ್ವಾನ ಮಾಡಲು ನಿರ್ಧಾರ ಮಾಡಲಾಗಿದೆ. ಆಸಕ್ತಿಯುಳ್ಳ ಸಂಸ್ಥೆಗಳು ಟೆಂಡರ್‌ನಲ್ಲಿ ಭಾಗಿಯಾಗಿಯಲು ಅವಕಾಶ ನೀಡಲಾಗುತ್ತದೆ.

Jaya Refrigeration and Air Condition