Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು ಸಂಜೆ ಏಕಾಏಕಿ ಮಳೆ ಅಬ್ಬರಿಸಿದೆ. ಬೆಳಗ್ಗೆಯಿಂದ ಕಾಣಿಸಿಕೊಳ್ಳದ ಮಳೆರಾಯ ಸಂಜೆ ಏಕಾಏಕಿ ಅಪ್ಪಳಿಸಿದೆ. ಕೆಲವೇ ನಿಮಿಷ ಸುರಿದ ಮಳೆಗೆ ಹಲವೆಡೆ ಅವಾಂತರ ಉಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನ ಪರದಾಟುವಂತಾಗಿದೆ.

Out Look Fashion

ಕಳೆದ 2-3 ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ಬಂದು ಹೋಗುತ್ತಿತ್ತು. ಆದ್ರೆ ಸೆಪ್ಟೆಂಬರ್‌ ಮೊದಲ ದಿನವೇ ಜೋರು ಮಳೆ ಸುರಿದಿದೆ. ಮಳೆಗಾಲದ ದಿನಗಳಿಗೆ ಹೋಲಿಸಿದ್ರೆ ಸೋಮವಾರ ಸಂಜೆ ಸುರಿದ ಮಳೆ ಬಿರುಸಾಗಿತ್ತು. ರಸ್ತೆಯಲ್ಲಿ ಜನ, ವಾಹನ ಸಂಚಾರ ಸಾಧ್ಯವಾಗದಷ್ಟು ಜೋರಿತ್ತು. ಮಿಂಚು ಗುಡುಗು ಕೂಡ ಇದ್ದು ಜನ ಭಯ ಭೀತರಾದರು. ವಾಹನ ಸವಾರರು ಮಳೆಯಲ್ಲಿ ಸಂಚಾರ ಮಾಡುವ ಧೈರ್ಯ ಮಾಡದೇ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿ ಮರ, ಕಟ್ಟಡಗಳ ಬಳಿ ಆಶ್ರಯ ಪಡೆದಿದ್ದರು. ಇನ್ನೂ ಅಲ್ಲಲ್ಲಿ ಟ್ರಾಫಿಕ್‌ ದಟ್ಟಣೆ ಕೂಡ ಉಂಟಾಗಿತ್ತು. 

Jaya Refrigeration and Air Condition