Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ವೀಡಿಯೊ ಮಾಡಿ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಜ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವನು ಅಪ್ರಾಪ್ತ ಬಾಲಕನಾಗಿದ್ದಾನೆ.

Out Look Fashion

ಕಾರ್ತಿಕ್, ರಾಕೇಶ ಸಲ್ಡಾನ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್, ಸುರೇಶ್ ಬಂಧಿತ ಆರೋಪಿಗಳು. ಮತ್ತೋರ್ವನು, ಅಪ್ರಾಪ್ತನಾಗಿದ್ದು ಆತನನ್ನು ಬಾಲಾಪರಾಧ ಗೃಹಕ್ಕೆ ಸೇರಿಸಿದ್ದಾರೆ ಎಂದು ತಿಳಿದು ಬಂದಿದೆ.

Jaya Refrigeration and Air Condition

ಗುರುಪುರ ಕೈಕಂಬದ ಕಿನ್ನಿಕಂಬಳ ಬಳಿಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಆಪ್ರಾಪ್ತೆಗೆ ಎರಡು ತಿಂಗಳ ಹಿಂದೆ ಸಾಮಾಜಿಕ ಜಾಲಾತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಕಾರ್ತಿಕ್ ಎಂಬಾತ ಪರಿಚಯವಾಗಿದ್ದ. ಈ ಪರಿಚಯ ಪ್ರೀತಿಗೆ ತಿರುಗಿದೆ. 2025ರ ಜೂನ್ ತಿಂಗಳ ಕೊನೆಯ ಶನಿವಾರ ಮಧ್ಯಾಹ್ನ ಅಪ್ರಾಪ್ತೆಯನ್ನು ಪುಸಲಾಯಿಸಿ ಕಾರ್ತಿಕ್ ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ದು ಹೋಟೆಲ್‌ನಲ್ಲಿ ಊಟ ಮಾಡಿಸಿ ಬಳಿಕ ಅಡ್ಯಾರ್ ಫಾಲ್ಸ್ ಬಳಿಯಿರುವ ಕಾಡಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ‌. ಇದೇ ವೇಳೆ ಕಾರ್ತಿಕ್‌ನ ಸ್ನೇಹಿತ ರಾಕೇಶ್ ಸಲ್ಡಾನ್ ಕೂಡಾ ಅತ್ಯಾಚಾರ ಎಸಗಿದ್ದಾನೆ. ರಾಕೇಶ್ ಅತ್ಯಾಚಾರ ಎಸಗುತ್ತಿದ್ದ ವೇಳೆ ಕಾರ್ತಿಕ್ ಅದನ್ನು ವೀಡಿಯೊ ಮಾಡಿದ್ದಾನೆ.

ಈ ವೀಡಿಯೋವನ್ನು ಸ್ನೇಹಿತರಿಗೆ ಕಳುಹಿಸಿದ್ದಾನೆ. ಈ ಬಗ್ಗೆ ಬಾಲಕಿ ಆ.16ರಂದು ಪೊಲೀಸ್ ದೂರು ದಾಖಲಿಸಿದ್ದಾಳೆ. ಈ ದೂರಿನನ್ವಯ ಪೊಕ್ಸೊ ಪ್ರಕರಣ ದಾಖಲಿಸಿ ಬಜ್ಪೆ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಆರೋಪಿಯನ್ನು ಹೊರತು ಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.