Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.

Out Look Fashion

ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

Jaya Refrigeration and Air Condition

ಮುಂಜಾನೆ 3 ಗಂಟೆಯಿಂದ ಬಿಸಿಲೆ – ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದ್ದು, ಸತತ ಐದು ಗಂಟೆಗಳಿಂದ ವಾಹನಗಳು ನಿಂತಲ್ಲೇ ನಿಂತಿವೆ. ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.