



ಬೆಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಎಐ ವಿಡಿಯೋ ಮೂಲಕ ಕಥೆ ಕಟ್ಟಿದ್ದ ಯೂಟ್ಯೂಬರ್ ಸಮೀರ್ ಮನೆ ಮೇಲೆ ಇಂದು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.


ಬೆಳ್ತಂಗಡಿ ಪೊಲೀಸ್ ಠಾಣೆಗೆ 2 ಬಾರಿ ಹಾಜರಾಗಿದ್ದ ಸಮೀರ್ ಸಮರ್ಪಕವಾಗಿ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಆತನ ಮನೆಯನ್ನು ಶೋಧಿಸಲಾಗಿದೆ ಎನ್ನಲಾಗಿದೆ.

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಮತ್ತು ತಂಡ, ಎಫ್.ಎಸ್.ಎಲ್.ವಿಭಾಗದ ಸೋಕೊ ಸಿಬ್ಬಂದಿ ಜತೆ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಸಮೀರ್‌ನ ಬಾಡಿಗೆ ಮನೆ ಮೇಲೆ ದಾಳಿ ನಡೆಸಲಾಯಿತು.
ಬೆಳ್ತಂಗಡಿ ನ್ಯಾಯಾಲಯದಿಂದ ಸೆ. 3ರಂದು ಸರ್ಚ್ ವಾರೆಂಟ್ ಪಡೆದು ಬೆಂಗಳೂರಿಗೆ ತೆರಳಿದ್ದ ತಂಡ ಸಮೀರ್‌ನ ಕಂಪ್ಯೂಟರ್, ಮೊಬೈಲ್ ಪರಿಶೀಲನೆ ನಡೆಸಿದೆ. ಇದನ್ನು ಜಪ್ತಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
