




ಮಂಗಳೂರು: ಬೆಳ್ತಂಗಡಿ ಠಾಣೆಗೆ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಶುಕ್ರವಾರ ಬೆಳಗ್ಗೆ ಆಗಮಿಸಿದ್ದಾರೆ.

ನಾಳೆ ಸಿ.ಎಸ್. ಚಿನ್ನಯ್ಯನ ಕಸ್ಟಡಿ ಅವಧಿ ಅಂತ್ಯಗೊಂಡಿದೆ. ಇದರೊಂದಿಗೆ ಜಯಂತ್ ಹಾಗೂ ಗಿರೀಶ್ ಮಟ್ಟಣ್ಣನವರ್ ಅವರ ವಿಚಾರಣೆಯೂ ನಡೆಯುತ್ತಿದೆ. ಆದ್ದರಿಂದ ಸದ್ಯದ ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆಯಲು ಅವರು ಆಗಮಿಸಿದ್ದಾರೆ. ಅಲ್ಲದೆ ಪ್ರಣಬ್ ಮೊಹಂತಿಯಿಂದಲೂ ಆರೋಪಿ ಚಿನ್ನಯ್ಯ ವಿಚಾರಣೆ ಸಾಧ್ಯತೆಯಿದೆ ಎನ್ನಲಾಗಿದೆ.

