





ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಇವರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಯಾದ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15 ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM) ಮತ್ತು ರಾಜ್ಯ ಸರಕಾರ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್ ನಿವಾಸ್ ಯೋಜನೆಯ ಪ್ರಗತಿಯ ಬಗ್ಗೆ ಚರ್ಚಿಸಿ ಸದರಿ ಯೋಜನೆಗಳ ಬಗ್ಗೆ ಪರಿಶೀಲಿಲನೆ ಮಾಡಿದರು.


ಏಕ ನಿವೇಶನ ವಿನ್ಯಾಸ ಅನುಮೋದನೆ, ಕಟ್ಟಡ ನಕ್ಷೆ ತಾಂತ್ರಿಕ ಅನುಮೋದನೆ, ಗ್ರಾಮ ಪಂಚಾಯತ್ ಆಡಳಿತ ಮತ್ತು ಅಭಿವೃದ್ಧಿಯಲ್ಲಿ ಇರುವ ಅಡಚಣೆಗೆ ಬಗ್ಗೆ ಮಾಹಿತಿ ಪಡೆದುಕೊಂಡು ಗ್ರಾಮ್ ಪಂಚಾಯತ್ ಆಡಳಿತದ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ತಮ್ಮ ಸೇವಾ ಅವಧಿಯಲ್ಲಿನ ಬಗ್ಗೆ ಅನುಭವವನ್ನು ಹಂಚಿಕೊಂಡರು.


ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಮನೆಗಳಿಂದ ಒಣ ಕಸವನ್ನು ಸಂಗ್ರಹಿಸಿ ಸೂಕ್ತವಾಗಿ ವಿಲೇವಾರಿ ಮಾಡೋದಕ್ಕೆ ಪ್ರಥಮ ಆದ್ಯತೆ ನೀಡಬೇಕೆಂದು ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಮತ್ತು ಅಧಿಕಾರಿ,ಸಿಬ್ಬಂದಿಗಳಿಗೆ ತಿಳಿಸಿದರು. ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಪಂಚಾಯತ್ ಅಭಿವೃದ್ಧಿಯಲ್ಲಿ ಸದಸ್ಯರ ನಡುವಿರುವ ಪರಸ್ಪರ ಅನ್ನೋನ್ಯತೆ ಬಗ್ಗೆ ತಿಳಿದು ಪ್ರಶಂಸಿದರು.
