



ಬಂಟ್ವಾಳ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಇಸಾಕ್ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಅಕ್ರಮವಾಗಿ ಧ್ವನಿವರ್ಧಕ ಅಳವಡಿಸಿ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ದಿನಕ್ಕೆ ಐದು ಬಾರಿಯಂತೆ ಅಜಾನ್ ಕೂಗುತ್ತಿರುವುದರಿಂದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ២.៥, 133/2025, 0 37, 92(3), 109 82 ಆಕ್ಟ್ ಹಾಗೂ 292 ಬಿಎನ್‌ಎಸ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಹಿಂದಿನ ಬೆಳವಣಿಗೆಗಳು:
31/07/2025 ರಂದು ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಧ್ವನಿವರ್ಧಕ ದುರುಪಯೋಗಕ್ಕೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು.
ಇದೇ ದಿನ ಧ್ವನಿವರ್ಧಕ ಪರವಾನಗಿ ರದ್ದುಗೊಳಿಸಲು ಗ್ರಾಮ ಪಂಚಾಯತ್ ಪೊಲೀಸರುಗೂ ಪತ್ರ ಬರೆದಿತ್ತು.
13/08/2025 ರಂದು ತಪ್ಪು ಮಾಹಿತಿ ನೀಡಿರುವುದು ಮತ್ತು ಪರವಾನಗಿಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಉಪಾಧೀಕ್ಷಕರು ಧ್ವನಿವರ್ಧಕ ಪರವಾನಗಿಯನ್ನು ರದ್ದುಗೊಳಿಸಿದ್ದರು.
06/09/2025 ರಂದು ಅಕ್ರಮ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
07/09/2025 ರಂದು ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಯನ್ನು ಹರಡಿದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.
