Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್‌ ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ದಾರೆ.

Out Look Fashion

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಇಂದು ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.

Jaya Refrigeration and Air Condition

ವಿಚಾರಣೆ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪರಪ್ಪನ ಅಗ್ರಹಾರದಿಂದ ಹಾಜರಾದ ದರ್ಶನ್‌, ನನಗೆ ದಯಮಾಡಿ ವಿಷ ನೀಡಿ. ಬಿಸಿಲು ನೋಡಿ ಬಹಳ ದಿನವಾಗಿದೆ. ಬಟ್ಟೆಗಳು ವಾಸನೆ ಬರುತ್ತಿವೆ. ಫಂಗಸ್‌ನಿಂದಾಗಿ ಇಲ್ಲಿ ಬದುಕಲು ಆಗುತ್ತಿಲ್ಲ. ದಯಮಾಡಿ ನನಗೆ ವಿಷ ನೀಡುವಂತೆ ಆದೇಶಿಸಿ ಎಂದು ಮನವಿ ಮಾಡಿದರು.