Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಡ್ಯ: ಮದ್ದೂರಿನ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ.

Out Look Fashion

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಬುಧವಾರ (ಸೆ.10) ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಸಿ.ಟಿ.ರವಿ ಭಾಷಣ ಮಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.

Jaya Refrigeration and Air Condition

ಅನ್ಯ ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ ಮತ್ತು ಸೌಹಾರ್ದತಾ ಭಾವನೆಗಳಿಗೆ ಭಾದಕವಾಗುವಂತೆ, ವೈರತ್ವ, ದ್ವೇಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿ ಪ್ರಕರಣ ದಾಖಲಾಗಿದೆ.