Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಡಿಕೇರಿ: ಅಕ್ರಮವಾಗಿ ಗೋವುಗಳನ್ನು (Cows) ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯಲ್ಲಿನ ಕಾಗಡಿಕಟ್ಟೆ ಬಳಿ ಇಂದು ಬೆಳಗ್ಗಿನ ಜಾವ 2:30 ಗಂಟೆ ಸುಮಾರಿಗೆ ನಡೆದಿದೆ.

Out Look Fashion

ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನ ಸಂಖ್ಯೆ KA13-B 3078ರಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಅಪಘಾತದಲ್ಲಿ ಮೂರು ಗೋವುಗಳು ಗಾಯಗೊಂಡಿವೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಆರೋಪಿಗಳನ್ನು ತಡರಾತ್ರಿಯೇ ಬೆರೆಡೆಗೆ ಸಾಗಿಸಲಾಗಿದೆ. ಆರೋಪಿಕಡೆಯವರು ಇನ್ನೋವಾ ಕಾರಿನಲ್ಲಿ ಬೇರೆಡೆಗೆ ಸಾಗಿಸಿದ್ದಾರೆ.

Jaya Refrigeration and Air Condition

ಅಪಘಾತದ ಬಳಿಕ ಕೊಡಗಿನಲ್ಲಿ ಗೋವುಗಳ ಅಕ್ರಮ ಸಾಗಾಟ ಹಾಗೂ ಹಾಗೂ ಗೋಹತ್ಯೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದಾರೆ.

ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ
ಘಟನೆ ಬಳಿಕ, ತಪ್ಪಿತಸ್ಥರ ವಿರುದ್ಧ ಪೊಲೀಸ್‌ ಇಲಾಖೆ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೇ ಕ್ರಮ ಕೈಗೊಳ್ಳಬೇಕು. ಇಲ್ಲಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದು ಜಾಗರಣ ವೇದಿಕೆ ಮುಖಂಡ ಬೋಜೆಗೌಡ ಎಚ್ಚರಿಸಿದ್ದಾರೆ.