Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು: ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಪುತ್ತೂರು ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 17/10/2025ರ ಸಂಜೆ ದರ್ಬೆಯಿಂದ ಮಾಣಿ-ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸರ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸಂಚಾರಿ ಠಾಣೆಯ ಪೊಲೀಸರು ಆಟೋ ರಿಕ್ಷಾಕ್ಕೆ ಅಡ್ಡಲಾಗಿ ಬಂದು ಚಾಲಕನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸುವುದು ಕಂಡುಬಂದಿರುತ್ತದೆ.

Out Look Fashion

ಮೂಲಗಳ ಪ್ರಕಾರ, ಹಲ್ಲೆಗೊಳಗಾದ ಆಟೋ ಚಾಲಕ (ಮುಕ್ವೆ ನಿವಾಸಿ) ಶುಕ್ರವಾರ ಸಂಜೆ ದರ್ಬೆ ಸಮೀಪದ ಬೈಪಾಸ್‌ ರಸ್ತೆಯಲ್ಲಿ ಆಟೋ ನಿಲ್ಲಿಸಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಗಮಿಸಿದ ಪುತ್ತೂರು ಸಂಚಾರಿ ಪೊಲೀಸರು ಆಟೋ ಮುಂದೆ ತಮ್ಮ ಬೈಕ್ ನಿಲ್ಲಿಸಿದ್ದಾರೆ. ಈ ವೇಳೆ ಆಟೋ ಚಾಲಕ ಡಿವೈಡರ್ ದಾಟಿ ಅಶ್ವಿನಿ ವೃತ್ತದ ಕಡೆಗೆ ತೆರಳಿದ್ದಾರೆ ಎನ್ನಲಾಗಿದೆ. ಪೊಲೀಸರು ಆಟೋವನ್ನು ಹಿಂಬಾಲಿಸಿಕೊಂಡು ಬಂದು ಕಾಲೇಜು ಮುಂಭಾಗದ ಮುಖ್ಯರಸ್ತೆಯಲ್ಲಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಚಾಲಕ ತಿಳಿಸಿದ್ದಾರೆ. “ಮೊಬೈಲ್ನಲ್ಲಿ ರೆಕಾರ್ಡ್ ಮಾಡುತ್ತೀಯಾ” ಎಂದು ಪ್ರಶ್ನಿಸುತ್ತಿರುವುದು ವಿಡಿಯೋದಲ್ಲಿ ಕೇಳಿಸುತ್ತದೆ.

Jaya Refrigeration and Air Condition

ಹಲ್ಲೆಗೊಳಗಾದ ಚಾಲಕನನ್ನು ನಂತರ ಘಟನಾ ಸ್ಥಳದಲ್ಲಿ ಜನ ಸೇರುತಿದ್ದಂತೆ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ರಿಕ್ಷಾ ಚಾಲಕ ಡಿವೈಎಸ್ಪಿ ಕಚೇರಿಗೆ ತೆರಳಿ ಮೌಖಿಕವಾಗಿ ದೂರು ನೀಡಿರುವುದಾಗಿಯೂ, ಹಲ್ಲೆಯಿಂದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿಯೂ ತಿಳಿಸಿದ್ದಾರೆ. ಡಿವೈಎಸ್ಪಿ ಕಛೇರಿಗೆ ತೆರಳಿ ಮಾಹಿತಿ ನೀಡಿದ ಬಳಿಕ ರಿಕ್ಷಾವನ್ನು ಬಿಟ್ಟು ಕಳುಹಿಸರುವುದಾಗಿ ಅವರು ತಿಳಿಸಿದ್ದಾರೆ.