



ಪುತ್ತೂರು: ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ನಡೆದಿದೆ.


ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮವು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಜರಗಿತ್ತು . ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾದ ಹಿನ್ನೆಲೆ ನುಕೂನುಗ್ಗಲಾಗಿ 11 ಮಹಿಳೆಯರು ಮತ್ತು ಮಕ್ಕಳು ಅಸ್ವಸ್ತಗೊಂಡಿದ್ದಾರೆ.


ಗಾಯಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಯೋಗೀತ(20), ಸಭಾ ಮಾಡಾವು(20), ಆಮೀನಾ ಪಾಟ್ರಕೋಡಿ(56), ನೇತ್ರಾವತಿ ಇರ್ದೆ(37), ಲೀಲಾವತಿ ಕಡಬ((50), ವಸಂತಿ ಬಲ್ನಾಡ್ (53), ಕುಸುಮ( 62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಹಾಗೂ ಜಸೀಲಾ(30) ಎಂಬವರು ನೂಕುನುಗ್ಗಲಾದ ಮೇಲೆ ಆಮ್ಲಜನಕದ ಕೊರತೆಯುಂಟಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೇನು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ
