Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು : ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತಿದ್ದ ವ್ಯಕ್ತಿಯ ಕಾಲಿಗೆ ಪೊಲೀಸರು ಬೆಳ್ಳoಬೆಳಗ್ಗೆ ಗುಂಡು ಹೊಡೆದ ಘಟನೆ ಈಶ್ವರ ಮಂಗಲ ಎಂಬಲ್ಲಿ ನಡೆದಿದೆ.

Out Look Fashion

ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ.

Jaya Refrigeration and Air Condition

ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ.

ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು. ಆರೋಪಿಯನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.