Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ಕೆಲವೆಡೆ ಒಣ ಹವೆಯಿರಲಿದೆ.

Out Look Fashion


ಕರಾವಳಿಯ ಜಿಲ್ಲೆಗಳಲ್ಲಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್‌, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾ೦ತರ, ಬೆ೦ಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಲಘು ಮಳೆಯ ಸಾಧ್ಯತೆ ಇದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ
ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Jaya Refrigeration and Air Condition