Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Out Look Fashion

ಡಿಸೆಂಬರ್ 15, 2025 ರಂದು ಸಂಜೆ, ಅಪ್ರಾಪ್ತ ವಯಸ್ಸಿನ ಪಿರ್ಯಾದಿದಾರರು ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಒಂದು ಜುವೆಲ್ಲರಿಯ ಹಿಂಭಾಗದ ಬಹಿರ್ದೆಸೆಗೆ ತೆರಳಿದ್ದ ವೇಳೆ, ಜುವೆಲ್ಲರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬಾಲಕರು ವಿಡಿಯೋ ಮಾಡುತ್ತಿದ್ದಾರೆಂದು ಆರೋಪಿಸಿ ಮೂವರನ್ನೂ ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಪಿರ್ಯಾದಿದಾರರು ದೂರಿನಲ್ಲಿ ತಿಳಿಸಿದ್ದಾರೆ.

Jaya Refrigeration and Air Condition

ಈ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 143/2025 ಅಡಿ, ಭಾರತೀಯ ನ್ಯಾಯ ಸಂಹಿತೆ (BNS–2023) ಕಲಂ 126(2), 115(1) ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದಕ್ಕೆ ಪ್ರತಿಯಾಗಿ, ಸದ್ರಿ ಜುವೆಲ್ಲರಿಯ ಸಿಬ್ಬಂದಿಯವರು ಕೂಡ ಬಾಲಕರ ವಿರುದ್ಧ ಡಿಸೆಂಬರ್ 17, 2025 ರಂದು ಪ್ರತ್ಯೇಕ ದೂರರ್ಜಿ ಸಲ್ಲಿಸಿದ್ದು, ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.