Akshaya Sharadhotsava
Darbe Salon
Mahalingeshwara Car Air Condition
New Dot Dress Mart

Out Look Fashion

Jaya Refrigeration and Air Condition
Screenshot

ಬೆಂಗಳೂರು ಮೂಲದ ರಕ್ಷಿತಾ, ಗಗನ ಹಾಗೂ ಗೋಕರ್ಣ ಮೂಲದ ರಶ್ಮಿ ಅದೃಷ್ಟವಶಾತ್ ಪಾರಾಗಿದ್ದಾರೆ. ಮೂವರು ಕೂಡ ಬೆಂಗಳೂರಿನ ಡಿಲೈಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ರಜೆಯಿರುವ ಹಿನ್ನೆಲೆ ಮೂವರು ಸೇರಿಕೊಂಡು ಗೋಕರ್ಣಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಮೂವರು ಪವಾಡ ಸೃದೃಶ್ಯ ಪಾರಾಗಿದ್ದಾರೆ.

ಏನಿದು ಪ್ರಕರಣ?
ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಗುದ್ದಿದೆ. ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 9ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ.

ಗಾಯಾಳುಗಳನ್ನು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.