Akshaya Sharadhotsava
Darbe Salon
Mahalingeshwara Car Air Condition
New Dot Dress Mart

ತೈಪೆ: ತೈವಾನ್‌ನ ಈಶಾನ್ಯ ಕರಾವಳಿ ನಗರವಾದ ಯಿಲಾನ್‌ನಲ್ಲಿ ಶುಕ್ರವಾರ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

Out Look Fashion

73 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಇನ್ನೂ ಭೂಮಿ ಕಂಪಿಸಿದ ಹಿನ್ನೆಲೆ ರಾಜಧಾನಿ ತೈಪೆಯಲ್ಲಿ ಬೃಹತ್‌ ಕಟ್ಟಡಗಳು ನೆಲಕ್ಕುರುಳಿವೆ ಎಂದು ವರದಿಗಳು ತಿಳಿಸಿವೆ. 

Jaya Refrigeration and Air Condition

ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ದೌಡಾಯಿಸಿದ್ದು, ಕಟ್ಟಡ ಅವಶೇಷಗಳ ಅಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇದರೊಂದಿಗೆ ಹಾನಿಯ ಪ್ರಮಾಣವನ್ನು ಅಂದಾಜು ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ.

ಕಳೆದ ಬುಧವಾರ ತೈವಾನ್‌ನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದು ಈವಾರದಲ್ಲಿ ನಡೆದ 2ನೇ ಭೂಕಂಪ ಆಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.