Tamanvi Silk
Darbe Salon
Mahalingeshwara Car Air Condition

ಮಂಗಳೂರು: ಕಳೆದ ಒಂದು ತಿಂಗಳಿಂದ ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸದೇ ಇದ್ದಿದ್ದಕ್ಕೆ ಮನನೊಂದು ಸೋಮೇಶ್ವರದ ಯುವಕನೊಬ್ಬ ಒಮನ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Out Look Fashion

ಆತ್ಮಹತ್ಯೆಗೆ ಶರಣಾದ ಯುವಕನನ್ನು ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಈತ ಕಳೆದ ಒಂದೂವರೆ ವರ್ಷದಿಂದ ಒಮನ್‍ನ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು, ಮರಳಿ ಒಮನ್‍ಗೆ ತೆರಳಿದ್ದ. ಇತ್ತೀಚೆ ಪ್ರೀತಿಸುತ್ತಿದ್ದ ಯುವತಿ ಪುನೀತ್‍ನ ಕರೆ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ತಿಳಿದು ಬಂದಿದೆ. 

ಈ ಬಗ್ಗೆ ಸ್ನೇಹಿತರೊಂದಿಗೆ ಮಾಹಿತಿ ಹಂಚಿಕೊಂಡಿದ್ದ ಪುನೀತ್, ಯುವತಿ ಪ್ರೀತಿ ನಿರಾಕರಿಸಿದ್ದಾಗಿ ಹೇಳಿಕೊಂಡಿದ್ದ. ಇದೇ ಕಾರಣಕ್ಕೆ ಮನನೊಂದ ಸಾಮಾಜಿಕ ಜಾಲತಾಣದಲ್ಲಿ ಲೈವ್ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 

Jaya Refrigeration and Air Condition