Tamanvi Silk
Darbe Salon
Mahalingeshwara Car Air Condition

ಉಪ್ಪಿನಂಗಡಿ: ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾ‌ರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ.

Out Look Fashion

ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆಯಿತು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Jaya Refrigeration and Air Condition