Tamanvi Silk
Darbe Salon
Mahalingeshwara Car Air Condition

ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ಕ್ಯಾಟರಿಂಗ್ ಸಂಸ್ಥೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ.

Out Look Fashion

ಶಂಕರಪುರದ ಸಾಲ್ ಮರ ಕ್ಯಾಟರಿಂಗ್ ಶೆಡ್ ಸಮೀಪದ ಒಂದು ಕೊಠಡಿಯಲ್ಲಿ ಗೌತಮ್ ಪೂಜಾರಿಯವರ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ವಿಷಯ ಗಮನಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

Jaya Refrigeration and Air Condition

ಸಾವಿಗೆ ಮುನ್ನ ಗೌತಮ್ ಪೂಜಾರಿ ಡೆತ್ ನೋಟ್ ಬರೆದಿಟ್ಟಿರುವುದು ತಿಳಿದುಬಂದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


ಗೌತಮ್ ಪೂಜಾರಿ ಅವಿವಾಹಿತರಾಗಿದ್ದು, ಕ್ಯಾಟರಿಂಗ್ ಸಂಸ್ಥೆಯಲ್ಲಿ ಹೆಡ್ ಕುಕ್ ಆಗಿ ಕೆಲಸ ಮಾಡುತ್ತಿದ್ದರು. ಸಮಾಜಮುಖಿ ಚಟುವಟಿಕೆಗಳಲ್ಲೂ ಅವರು ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿಸಿದ್ದಾರೆ.