Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ.

Out Look Fashion

ಮೃತರನ್ನು ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10:30ರ ಸುಮಾರಿಗೆ ಅವರು ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ರಾತ್ರಿ 11:45ರ ಸುಮಾರಿಗೆ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಆವರಣದ ಒಳಗೆ ಹೋಗಿದ್ದರು. ಈ ವೇಳೆ ನೀರಾನೆ ಹಠಾತ್ತಾಗಿ ಅವರ ಮೇಲೆ ದಾಳಿ ಮಾಡಿದೆ.

Jaya Refrigeration and Air Condition

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ (ಮಾ.20) ಬೆಳಿಗ್ಗೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಘಟನೆ ದುರದೃಷ್ಟಕರ, ಪ್ರತಿ ಜೀವವೂ ಅಮೂಲ್ಯವಾದದ್ದು, ಸರ್ಕಾರವು ಮೃತ ವೈದ್ಯರ ಕುಟುಂಬದ ಪರವಾಗಿ ನಿಲ್ಲಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಅವರು ಆದೇಶಿಸಿದ್ದಾರೆ. ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕುಷವಾಗಿ ತನಿಖೆ ನಡೆಸಲಿದೆ. ಘಟನೆ ಸಂಭವಿಸಲು ಕಾರಣಗಳೇನು? ಸುರಕ್ಷತಾ ಲೋಪಗಳಿವೆಯೇ ಎಂಬ ಬಗ್ಗೆ ಪರಾಮರ್ಶಿಸಿ, ಮುಂದಿನ 7 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.