




ಉಡುಪಿ: ಸಮಾಧಾನ ಮಹೋತ್ಸವದ ವಿರುದ್ಧ ಪ್ರತಿಭಟನೆ ನಡೆಸಿ, ಬಳಿಕ ಮೈದಾನಕ್ಕೆ ತೆರಳಲು ಯತ್ನಿಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಸಹಿತ 38 ಮಂದಿ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಾಗಿದೆ.

ಫೆಲೋಶಿಪ್ ಆಫ್ ಉಡುಪಿ ಡಿಸ್ಟ್ರಿಕ್ ಚರ್ಚಸ್ ವತಿಯಿಂದ ಮಾರ್ಚ್ 20ರಿಂದ 22ರವರೆಗೆ 3ದಿನ ಉಡುಪಿ ಮಿಷನ್ ಕಂಪೌಂಡ್ ಮೈದಾನದಲ್ಲಿ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮವನ್ನು ನ್ಯಾಯಾಲಯದ ಅನುಮತಿ ಪಡೆದು ಆಯೋಜಿಸಲಾಗಿತ್ತು.

ಸಮಾಧಾನ ಮಹೋತ್ಸವ ಕಾರ್ಯಕ್ರಮಕ್ಕೆ ಕ್ರಿಶ್ಚಿಯನ್ ಭಾಷಣಕಾರ ಮೋಹನ್ ಸಿ. ಲಾಜರಸ್ ಅವರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮದ ವಿರುದ್ಧ ಕೆಲವು ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
