Akshaya Sharadhotsava
Darbe Salon
Mahalingeshwara Car Air Condition
New Dot Dress Mart
Man hand holding a mobile phone with red screen and warning icon with the text “SCAM ALERT”, Security mobile concept, security risk.

ಉಡುಪಿ: ಟ್ರೆಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಂದ 11.75 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವಂಚನೆ ನಡೆಸಿದ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Out Look Fashion

ಟ್ರೆಡಿಂಗ್ ಕುರಿತು ತಿಳಿದುಕೊಳ್ಳುವ ಉದ್ದೇಶದಿಂದ ಸಹನಾ, ಒಂದು ಆ್ಯಪ್‌ ಅನ್ನು ಡೌನ್‌ಲೋಡ್ ಮಾಡಿಕೊಂಡಿದ್ದರು. ಸುಮಾರು 15 ದಿನಗಳ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಅವರನ್ನು ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾನೆ. ಆ ಗುಂಪಿನಲ್ಲಿ ಲಿಂಕ್ ಕಳುಹಿಸಿ, ಕೆವೈಸಿ ವಿವರಗಳನ್ನು ಭರ್ತಿ ಮಾಡಲು ಸೂಚಿಸಲಾಗಿದೆ. ಬಳಿಕ ಟ್ರೆಡಿಂಗ್ ಮೂಲಕ ಲಾಭ ದೊರೆಯುತ್ತದೆ ಎಂದು ನಂಬಿಸಿ, ಆರೋಪಿಗಳು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಸಹನಾ ಅವರು ಮಾರ್ಚ್ 6ರಿಂದ 14ರವರೆಗೆ ಹಂತ ಹಂತವಾಗಿ ಒಟ್ಟು 11,75,000 ರೂಪಾಯಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Jaya Refrigeration and Air Condition

ಆದರೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿಗಳು ಯಾವುದೇ ಲಾಭಾಂಶ ನೀಡದೇ, ಹೂಡಿಕೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.