Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದ ಮಂಗಳೂರು ಸಿಸಿಬಿ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Out Look Fashion

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ, ಪಂಪ್‌ವೆಲ್–ಎಕ್ಕೂರು ಪ್ರದೇಶದಲ್ಲಿ ಆಟೋ ರಿಕ್ಷಾ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡಲಾಗುತ್ತಿದೆ ಎಂಬ ಸುಳಿವಿನ ಆಧಾರದ ಮೇಲೆ 22-03-2026ರಂದು ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಆರೋಪಿಗಳು ಬಳಕೆ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆಹಚ್ಚಿ, ಮೂವರನ್ನು ವಶಕ್ಕೆ ಪಡೆಯಲಾಯಿತು.

Jaya Refrigeration and Air Condition

ಬಂಧಿತರು:

ಹೈದರ್ @ ಹೈದರ್ ಆಲಿ (53)
ಮೊಹಮ್ಮದ್ ಸಜಾದ್ (29)
ಜೈಸನ್ ಮೆನೆಜಸ್ (26)
ಆರೋಪಿಗಳಿಂದ ರೂ. 2.5 ಲಕ್ಷ ಮೌಲ್ಯದ 26 ಗ್ರಾಂ ಎಂಡಿಎಂಎ, ರೂ. 37,000 ನಗದು, 5 ಮೊಬೈಲ್ ಫೋನ್‌ಗಳು, ತೂಕಮಾಪನ ಯಂತ್ರ ಹಾಗೂ KA-19-AC-2245 ಸಂಖ್ಯೆಯ ಆಟೋ ರಿಕ್ಷಾ ಸೇರಿದಂತೆ ಒಟ್ಟು ರೂ. 4,37,500 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಪೊಲೀಸರ ಮಾಹಿತಿ ಪ್ರಕಾರ, ಪ್ರಮುಖ ಆರೋಪಿ ಹೈದರ್ ಆಲಿ ವಿರುದ್ಧ ಈಗಾಗಲೇ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಮತ್ತು 2024ರಲ್ಲಿ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿತ್ತು. ಅಲ್ಲದೆ ಉಳ್ಳಾಲ ಪೊಲೀಸ್ ಠಾಣೆಯಲ್ಲೂ ಹಲ್ಲೆ ಪ್ರಕರಣವಿದೆ.

ಈ ಜಾಲದಲ್ಲಿ ಇನ್ನೂ ಹಲವು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.