Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ನವ ಮಂಗಳೂರು ಬಂದರಿನ ಮೂಲಸೌಕರ್ಯಗಳು ಮೇಲ್ದರ್ಜೆಗೇರಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು 438.29 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಿದೆ.

Out Look Fashion

ಈ ಯೋಜನೆಯಿಂದ ಬಂದರಿನ ಬರ್ತ್‌ ನಂ.9ರಲ್ಲಿ ಕೈಗೆತ್ತಿಕೊಳ್ಳಲಿರುವ ಪುನರ್‌ ಅಭಿವೃದ್ಧಿ ಕಾಮಗಾರಿಯು ಲಿಕ್ವಿಡ್‌ ಕಾರ್ಗೋ ನಿರ್ವಹಣಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ. ಇದು ಬೃಹತ್ ಹಡಗುಗಳ ಆಗಮನಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಡುವುದಲ್ಲದೆ ಕರಾವಳಿ ಕರ್ನಾಟಕ ಮತ್ತು ಕೇರಳದ ಒಳನಾಡು ಪ್ರದೇಶಗಳಿಗೆ ಪ್ರಮುಖ ಮೆರಿಟೈಮ್‌ ಹಾಗೂ ಎನರ್ಜಿ ಗೇಟ್‌ವೇ ಆಗಿ ಬಂದರಿನ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಿದೆ.

Jaya Refrigeration and Air Condition

ಈ ಅಭಿವೃದ್ಧಿ ಕಾಮಗಾರಿ ಯೋಜನೆಯು ಕರಾವಳಿ ಭಾಗದ ಪ್ರಮುಖ ಕೈಗಾರಿಕೆಗಳು, ಲಾಜಿಸ್ಟಿಕ್ಸ್ ವ್ಯವಸ್ಥೆ ಮತ್ತು ಒಟ್ಟಾರೆ ಆರ್ಥಿಕ ಬೆಳವಣಿಗೆಗೆ ದೊಡ್ಡ ಮಟ್ಟದ ಬೆಂಬಲ ನೀಡಲಿದೆ.