




ಹೈದರಾಬಾದ್: ಕುಡಿಯೋಕೆ ನೀರು ಕೇಳಲು ಬಂದು ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿರುವ ಘಟನೆ ಆಂಧ್ರಪ್ರದೇಶದಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆಯು (30) ಸರ್ಕಾರಿ ಉದ್ಯೋಗಿಯಾಗಿದ್ದು, ಮನೆಯಲ್ಲಿ ಒಬ್ಬರೇ ಇರುವಾಗ ಬಂದು ದುಷ್ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆ ನಡೆದ ದಿನ ಮಧ್ಯಾಹ್ನ 3:30ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೋರ್ವ ಮನೆಗೆ ಬಂದು ಕುಡಿಯಲು ನೀರು ಕೇಳಿದ್ದಾನೆ. ಅವರು ಒಳಗೆ ಹೋಗುತ್ತಿದ್ದಂತೆ ಹಿಂದಿನಿಂದ ಎಗರಿ, ಬಲವಂತವಾಗಿ ಬಟ್ಟೆಯಿಂದ ಕೈ ಕಟ್ಟಿ ಚಾಕು ತೋರಿಸಿದ್ದಾನೆ. ಬಳಿಕ ಸಂತ್ರಸ್ತೆಯ ಮೇಲೆ ಹಲ್ಲೆ ನಡೆಸಿ, ಲೈಂಗಿಕವಾಗಿ ಚಿತ್ರಹಿಂಸೆ ನೀಡಿ ಪರಾರಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
