Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ
ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್ 9, 2026 ರಂದು ಫಲಿತಾಂಶ ಹೊರಬೀಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.

Out Look Fashion

ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆದಿದ್ದ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 9 ರಂದು ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಈ ಮೊದಲು ಏಪ್ರಿಲ್7, 2026 ರಂದು ಫಲಿತಾಂಶ ಪ್ರಕಟಿಸುವ ಬಗ್ಗೆ ಸೂಚನೆ ನೀಡಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಇಂದು(ಏಪ್ರಿಲ್7)
ಫಲಿತಾಂಶ ಪ್ರಕಟವಾಗುತ್ತಿಲ್ಲ.

Jaya Refrigeration and Air Condition

ಅಧಿಕೃತ ಸಮಯ: ಫಲಿತಾಂಶ ಪ್ರಕಟವಾಗುವ ದಿನ ಬೆಳಿಗ್ಗೆ 11:00 ಗಂಟೆಗೆ ಲಿಂಕ್ ಲಭ್ಯವಾಗಲಿದೆ.
ವೆಬ್‌ಸೈಟ್: ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ನೋಡಬಹುದು:

✅karresults.nic.in
✅kseab.karnataka.gov.in
ಫಲಿತಾಂಶನೋಡುವುದುಹೇಗೆ?

  1. ಮೇಲೆ ತಿಳಿಸಿದ ಯಾವುದಾದರೂ ಒಂದು ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ‘2nd PUC Exam-1 Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  3. ನಿಮ್ಮ ನೋಂದಣಿಸಂಖ್ಯೆ (Registration
    Number) ನಮೂದಿಸಿ.
  4. ನಿಮ್ಮ ವಿಷಯದ ಸ್ಟ್ರೀಮ್
    (Arts/Commerce/Science) ಆಯ್ಕೆ ಮಾಡಿ.
  5. Submit ಬಟನ್ ಒತ್ತಿದರೆ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.