Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

Out Look Fashion

ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಭಾಗದಲ್ಲಿರುವ ಸದಾಫ್ ಜಿ ಮೊಹಮ್ಮದ್ ಮನೆ ಬಳಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ಮನೆಯ ಟೆರೆಸ್‌ನಿಂದ ಪಕ್ಕದ ಶೆಡ್ ಮೇಲ್ಚಾವಣಿಗೆ ಜಿಗಿದು ತಪ್ಪಿಸಿಕೊಂಡಿರುವ ಘಟನೆ ನಡೆದಿದೆ. ಮಲ್ಪೆ ಠಾಣೆಯ ಪಿಎಸ್‌ಐ ಗಂಗಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸ್ಥಳೀಯರ ಮಾಹಿತಿಯ ಮೇರೆಗೆ ಮೂರು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಒಂದು ಹುಂಡೈ ಐ20 ಕಾರಿಗೆ ಮಾರುತಿ ಸುಜುಕಿ ಬಲೆನೊ ಕಾರಿನ ನಕಲಿ ನಂಬರ್ ಪ್ಲೇಟ್ ಅಳವಡಿಸಿರುವುದು ಪತ್ತೆಯಾಗಿದೆ. ಜೊತೆಗೆ ಹೊಂಡಾ ಸಿಟಿ ಮತ್ತು ಸ್ವಿಫ್ಟ್ ಕಾರುಗಳ ಮೇಲೂ ಅನುಮಾನ ವ್ಯಕ್ತವಾಗಿದೆ.

Jaya Refrigeration and Air Condition

ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಮೂರು ಕಾರುಗಳನ್ನು ಪೊಲೀಸರು ಮಹಜರು ನಡೆಸಿ ವಶಪಡಿಸಿಕೊಂಡಿದ್ದಾರೆ. ಆರೋಪಿ ಸದಾಫ್ ಜಿ ಮೊಹಮ್ಮದ್ ಈಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನಕಲಿ ನಂಬರ್ ಪ್ಲೇಟ್ ಬಳಸಿ ತೆರಿಗೆ ತಪ್ಪಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.