Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಹಿಟ್ಲರ್ ಕಲ್ಯಾಣ’ ಧಾರವಾಹಿ (Hitler Kalyana) ಖ್ಯಾತಿಯ ನಟ ದಿಲೀಪ್ ರಾಜ್ (Dileep Raj) ಇಂದು ಬೆಳಗಿನ ಜಾವ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ.

Out Look Fashion

ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.

Jaya Refrigeration and Air Condition

ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್‌ ರಾಜ್‌ ಕೊನೆಯದಾಗಿ ʼಲವ್‌ ಮಾಕ್ಟೇಲ್‌ 3ʼ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರವಾಹಿಗಳಲ್ಲೂ ನಟಿಸಿದ್ದರು.

ಇಂದು ಬೆಳಗಿನ ಜಾವ ದಿಲೀಪ್ ರಾಜ್‌ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ರಾಜ್ ಅವರ ಮೃತದೇಹ ಕುಮಾರಸ್ವಾಮಿ ಲೇಔಟ್‌ನ ಅಪೋಲೊ ಆಸ್ಪತ್ರೆಯಲ್ಲಿರಿಸಲಾಗಿದೆ.