Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಉಡುಪಿ: ಹಿಜಾಬ್ (Hijab) ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು (Hindu Organizations) ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ.

Out Look Fashion

ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್ (Sunil K.R) ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಕಿಡಿಕಾರಿದ್ದಾರೆ.

Jaya Refrigeration and Air Condition

ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ನಿರ್ಧಾರದ ಹಿಂದೆ ಬಹಳ ದೊಡ್ಡ ಷಡ್ಯಂತ್ರವಿದೆ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.