Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ, ಇಂದು ( ಮೇ.21) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

Out Look Fashion

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಪ್ರದೇಶಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

Jaya Refrigeration and Air Condition

ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಆಕಾಶ ಸಾಮಾನ್ಯವಾಗಿ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮುಂಗಾರು ಮೇ 26 ಕ್ಕೆ ಕೇರಳ ಪ್ರವೇಶಿಸುತ್ತಿರುವುದರಿಂದ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ.