Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಸಫಲರಾಗಿದ್ದೇವೆ. ಸಚಿವ ಸ್ಥಾನಕ್ಕೆ ಕೊಟ್ಟ ರಾಜೀನಾಮೆ ವಾಪಸ್‌ ಪಡೆದಿದ್ದಾರೆಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ (Randeep Singh Surjewala) ತಿಳಿಸಿದ್ದಾರೆ.

Out Look Fashion

ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್‌ ಪಡೆದಿದ್ದಾರೆ. ಸಚಿವ ಸಂಪುಟದಲ್ಲಿ ಮುಂದುವರಿದು ಕೆಲಸ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. 

Jaya Refrigeration and Air Condition

ಇವತ್ತು ನಿಮ್ಮ ಯಾವುದೇ ಪ್ರಶ್ನೆಗೆ ಉತ್ತರ ಕೊಡಲ್ಲ. ಬಿಜೆಪಿ ಸಾಕಷ್ಟು ಗೊಂದಲ ನಿರ್ಮಾಣ ಮಾಡಿದೆ. ಎನ್‌ಎಸ್‌ಯುಐನಿಂದಲೂ ಬಿ.ಕೆ.ಹರಿಪ್ರಸಾದ್ ಜೊತೆ ರಾಮಲಿಂಗಾರೆಡ್ಡಿ ಇದ್ದರು. ವಿದ್ಯಾರ್ಥಿ ಸಂಘಟನೆಯಿಂದಲೂ ಅವರ ಜೊತೆಗಿದ್ದಾರೆ. ರಾಮಲಿಂಗಾರೆಡ್ಡಿ ಅವರು 8 ಬಾರಿ ಶಾಸಕರಾಗಿದ್ದಾರೆ. ಪಕ್ಷಕ್ಕೆ ಅವರ ಅನುಭವ ಮೌಲ್ಯಯುತವಾದದ್ದು ಎಂದು ತಿಳಿಸಿದರು.