Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ₹23.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಏಪ್ರಿಲ್ 5ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣದ ತನಿಖೆ ವೇಳೆ, ಮೇ 15ರಂದು ಬಂಟ್ವಾಳದ ಕೊಳ್ನಾಡು ಮೂಲದ ಹಾಗೂ ಕಾಸರಗೋಡಿನಲ್ಲಿ ವಾಸವಾಗಿದ್ದ ಹಮೀದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

Out Look Fashion

ಆರೋಪಿಯ ವಿಚಾರಣೆಯಿಂದ ಲಭಿಸಿದ ಮಾಹಿತಿಯ ಆಧಾರದಲ್ಲಿ ಜೂನ್ 7ರಂದು ಮತ್ತೋರ್ವ ಆರೋಪಿ ಜಾಬೀರ್ ಅಲಿಯಾಸ್ ಜಾಬೀ ಎಂಬಾತನನ್ನು ಬಂಧಿಸಲಾಯಿತು. ವಿಚಾರಣೆ ವೇಳೆ ಪುಂಜಾಲಕಟ್ಟೆ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ನಗದು, ಉಪ್ಪಿನಂಗಡಿ ಠಾಣೆಯ ಮತ್ತೊಂದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

Jaya Refrigeration and Air Condition
Screenshot

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹23 ಲಕ್ಷ 67 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.

ಇದಲ್ಲದೆ, ಆರೋಪಿಗಳು ಉಪ್ಪಿನಂಗಡಿ, ಬಂಟ್ವಾಳ ನಗರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿಯೂ ಸೇರಿ ಒಟ್ಟು ಐದು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ, ಸಿಪಿಐಗಳು ಹಾಗೂ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಅಧಿಕಾರಿಗಳ ವಿಶೇಷ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದು, ತನಿಖೆ ಮುಂದುವರಿದಿದೆ.